ಬಿಜೆಪಿ ಜಿಲ್ಲಾ ಅಲ್ಪಂಖ್ಯಾತ ಮೋರ್ಚಾ: ಸ್ವಚ್ಛತಾ ಅಭಿಯಾನ
ಉಡುಪಿ (ಉಡುಪಿ ಟೈಮ್ಸ್ ವರದಿ): ಪ್ರಧಾನಿ ನರೇಂದ್ರ ಮೋದಿಯವರ ‘ಸೇವಾ ಹೀ ಸಂಘಟನ್’ ತತ್ವದಡಿ 151ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಚರ್ಚ್, ದೇವಸ್ಥಾನ, ಮಸೀದಿ ಮತ್ತು ಜೈನ ಬಸದಿ ಸ್ವಚ್ಛತಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ವಿವಿದೆಡೆಯಲ್ಲಿ ಚಾಲನೆಗೊಂಡಿತು.
ಈ ಕಾರ್ಯಕ್ರಮವನ್ನು ಲೇಡಿ ಆಫ್ ಫಾತಿಮ ಚರ್ಚ್ ಪೆರಂಪಳ್ಳಿ ವಠಾರದಲ್ಲಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಚರ್ಚ್ ಪರಿಸರದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಜ್ಯ ಕ್ರೈಸ್ತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಜೋಯ್ಲಸ್ ಡಿ’ಸೋಜರವರನ್ನು ಅಭಿನಂದಿಸಲಾಯಿತು. ಚರ್ಚಿನ ಧರ್ಮಗುರು ಅನಿಲ್ ಡಿಸೋಜಾ, ಧರ್ಮಗುರು ರೋಮಿಯೋ ಲೂಯಿಸ್, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವುದ್ ಅಬೂಬಕರ್ , ಬಿಜೆಪಿ ಉಡುಪಿ ನಗರ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ನಗರಸಭಾ ಸದಸ್ಯರಾದ ಟಿ.ಜಿ. ಹೆಗ್ಡೆ, ಮಂಜುನಾಥ್ ಮಣಿಪಾಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪೆರ್ಣಂಕಿಲ, ಗೀತಾಂಜಲಿ ಸುವರ್ಣ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿ’ಸೋಜ, ಶೇಖ್ ಆಸಿಫ್, ಉಪಾಧ್ಯಕ್ಷರಾದ ಮೊಹಮ್ಮದ್ ಅಫ್ಸರ್, ರುಡಾಲ್ಫ್ ಡಿ’ಸೋಜ, ಕಾರ್ಯದರ್ಶಿಗಳಾದ ಗ್ರೇಟಾ ಮಸ್ಕರೇನಸ್, ಡೆನ್ನಿಸ್ ಪಸನ್ನಾ, ಮಿಲ್ಟನ್ ಡಿಸೋಜ, ಮೈಕಲ್ ಡಿಸೋಜ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು