ಕೊಚ್ಚಿನ್: ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆ ಪ್ರಕರಣ 6 ಎಸ್ ಡಿಪಿಐ ಕಾರ್ಯಕರ್ತರ ಬಂಧನ

ಕೊಚ್ಚಿನ್: ಎರಡು ಗುಂಪುಗಳ ನಡುವೆ ಫೆ.24ರ ರಾತ್ರಿ ನಡೆದ ಗಲಭೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನೋರ್ವ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿಯೊಂದು ವರದಿಯಾಗಿದೆ.
     ಕೊಲೆಯಾದ ವ್ಯಕ್ತಿಯನ್ನು ನಂದು ಎಂದು ಗುರುತಿಸಲಾಗಿದ್ದು, ಕೇರಳದ ಅಲಪ್ಪು ವಿನ ವಲಯಾರ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಎರಡು ತಂಡಗಳ ನಡುವೆ ನಿನ್ನೆ ರಾತ್ರಿ ಘರ್ಷಣೆ ಆರಂಭಗೊಂಡಿತ್ತು. ಈ ಗಲಾಟೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರಿಗೆ ಹರಿತವಾದ ಆಯುಧದಿಂದ ಚುಚ್ಚಲಾಗಿದೆ.

ಗಂಭೀರ ಗಾಯಗೊಂಡಿದ್ದ ಈತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿದ್ದ ವೇಳೆ  ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಗಲಾಟೆಯಲ್ಲಿ ಆರ್ ಎಸ್ ಎಸ್ ಮತ್ತು ಎಸ್ ಡಿಪಿಐ ನ ಕೆಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೆ ಘಟನೆಯನ್ನು ಖಂಡಿಸಿ ಇಂದು (ಫೆ25) ಅಲಪ್ಪು ಬಂದ್ ಗೆ ಬಿಜೆಪಿ ಕರೆ ನೀಡಿದೆ ಎಂದು ವರದಿಯಾಗಿದೆ

Leave a Reply

Your email address will not be published. Required fields are marked *

error: Content is protected !!