ಬೈಕ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ಸವಾರರಿಬ್ಬರು ಮೃತ್ಯು

ಚಿಕ್ಕಮಗಳೂರು ಮಾ.23 : ಬೈಕ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕೃಷಿ ವ್ಯವಸಾಯೋತ್ಪನ್ನ ಕಚೇರಿ ಬಳಿ ನಡೆದಿದೆ.

ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!