ಉಡುಪಿ: ಎರಡು ಪ್ರತ್ಯೇಕ ಪ್ರಕರಣ – ಇಬ್ಬರು ಯುವಕರು ನಾಪತ್ತೆ
ಉಡುಪಿ(ಉಡುಪಿ ಟೈಮ್ಸ್ ವರದಿ) : ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣಗಳು ಠಾಣೆಯಲ್ಲಿ ದಾಖಲಾಗಿದೆ. ಒಂದು ಪ್ರಕರಣದಲ್ಲಿ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಕೃಷ್ಣಮೂರ್ತಿ (28) ಎಂಬವರು ನಾಪತ್ತೆಯಾಗಿದ್ದಾರೆ. ಇವರು ಫೆ.21 ರಂದು ಸಿದ್ದಾಪುರದ ಮೇಲ್ಜಡ್ಡು ಎಂಬಲ್ಲಿಂದ ಸಿದ್ದಾಪುರ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕಿರಣ್ (30) ಎಂಬುವವರು ಪುತ್ತೂರು ಗ್ರಾಮದ ನಿಟ್ಟೂರಿನಿಂದ ಕಾಣೆಯಾಗಿದ್ದಾರೆ. ಇವರು ಮಾನಸಿಕ ಅಸ್ವಸ್ಥರಾಗಿದ್ದು, ನಿಟ್ಟೂರಿನ ರಾಜ್ಯ ಮಹಿಳಾ ನಿಲಯ ಸಂಸ್ಥೆಯಲ್ಲಿ 1 ವರ್ಷದಿಂದ ವಾಸವಿದ್ದರು. ಫೆ.24 ರಂದು ಬಟ್ಟೆ ಒಣ ಹಾಕಲು ಇತರರೊಂದಿಗೆ ಹೊರ ಹೋದವರು ವಾಪಾಸು ಬಾರದೇ ಸಂಸ್ದೆಯಿಂದ ತಪ್ಪಿಸಿಕೊಂಡು ಕಾಣೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.