ಉಂಗುರ ನುಂಗಿ 8 ತಿಂಗಳ ಮಗು ಮೃತ್ಯು

ಮ‌ಡಿಕೇರಿ ಮಾ.23: ಆಟವಾಡುತ್ತಿದ್ದ 8 ತಿಂಗಳ ಮಗುವೊಂದು ಉಂಗುರ ನುಂಗಿ ಮೃತಪಟ್ಟಿರುವ ದಾರುಣ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಮುನೀರ್ ಎಂಬವರ ಮಗು ನಿನ್ನೆ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮಡಿಕೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ.ಆದರೆ ಬೆಳಿಗ್ಗೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!