ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಆಯೋಗ

ಬೆಂಗಳೂರು ಮಾ.24 : ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ. ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!