ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೋಗುವವರಿಗೆ ಸ್ಪೋಕನ್ ಇಂಗ್ಲೀಷ್, ಗಣಿತದ ಅರಿವು ಅಗತ್ಯ: ಮುರಳೀಧರ ಉಪಾಧ್ಯ

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್, ಗಣಿತದ ಅರಿವು ಅಗತ್ಯ. ಹಾಗೇ ಕಂಪ್ಯೂಟರ್ ಜ್ಞಾನ ಹಾಗೂ ಸಾಮಾನ್ಯ ಜ್ಞಾನವೂ ಅತೀ ಅಗತ್ಯವಾಗಿದೆ ಎಂದು ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಮುರಳೀಧರ ಉಪಾಧ್ಯ ಅವರು ಹೇಳಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಹಾಗೂ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ಸಹಯೋಗದಲ್ಲಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿ ವೇತನ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಕಂಪೆನಿಗಳಿಗೆ ಉದ್ಯೋಗ ಅರಸಿ ಹೋಗುವವರಿಗೆ ಅಗತ್ಯವಾಗಿ ಕಂಪ್ಯೂಟರ್ ಶಿಕ್ಷಣ ಬೇಕು. ಮುಂದಿನ ದಿನಗಳಲ್ಲಿ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವಂತಹ ಉದ್ಯೋಗವಕಾಶಗಳೇ ಹೆಚ್ಚಾಗಲಿದೆ ಎಂದು ತಿಳಿಸಿದರು.


ಕಾಲೇಜು ಅಭಿವೃದ್ಧಿ ಸಮಿತಿಯ ಸಂಚಾಲಕರಾದ ಎನ್. ಎಸ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಹಿರಿಯಡಕದ ಬಾಲವಾಡಿ ಶಾಲಾ ಶಿಕ್ಷಕಿ ಸುಶೀಲಾ, ಆಶಾ ಕಾರ್ಯಕರ್ತೆ ರಾಜೀವಿ ಪೆಣರ್ಂಕಿಲರವರನ್ನು ಸನ್ಮಾನಿಸಲಾಯಿತು. ಈ ವೇಳೆನೃತ್ಯ ನಿಕೇತನ ಕೊಡವೂರು ಇದರ ಹಿರಿಯಡಕ ತರಗತಿಯ ವಿದ್ಯಾರ್ಥಿನಿಯರಿಂದ ಭರತ ನಾಟ್ಯ ಪ್ರದರ್ಶನ ನಡೆಯಿತು.
ಈ ಸಂದರ್ಭದ ಪ್ರಾಂಶುಪಾಲ ಮಂಜುನಾಥ ಭಟ್, ಉಪ ಪ್ರಾಂಶುಪಾಲೆ ಶಾರದಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದೇವರಾಜ್ ಶಾಸ್ತ್ರಿ, ಟ್ರಸ್ಟ್ ನ ಮುರಳೀಧರ ಹಾಲಂಬಿ, ಯು. ದಾಮೋದರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!