ವಿಧಾನ ಸಭಾ ಚುನಾವಣೆ: ವರುಣಾ ಕ್ಷೇತ್ರದಿಂದ ಸ್ಪರ್ಧೆ: ಸಿದ್ದರಾಮಯ್ಯ ಇಂಗಿತ

ಚಿತ್ರದುರ್ಗ ಮಾ.24 : ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸು ಬಗ್ಗೆ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಚುನಾವಣೆಗೆ ಸ್ಪರ್ಧಿಸುವಂತೆ ರಾಜ್ಯದ 25 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಆ ಎಲ್ಲ ಕಡೆಯೂ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧಿಸುವುದು ಸೂಕ್ತ ಎಂಬುದಾಗಿ ಕುಟುಂಬ ಅಭಿಪ್ರಾಯಪಟ್ಟಿದೆ. ಮತ್ತೊಂದು ಕ್ಷೇತ್ರದಲ್ಲಿಯೂ ಸ್ಪರ್ಧಿಸುವಂತೆ ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ. ವರುಣಾ ಟಿಕೆಟ್ ಅಂತಿಮಗೊಳಿಸುವಂತೆ ಪಕ್ಷಕ್ಕೆ ತಿಳಿಸಿದ್ದೇನೆ. ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು’ ಎಂದರು.

Leave a Reply

Your email address will not be published. Required fields are marked *

error: Content is protected !!