ಮಾ. 31 ರಿಂದ SSLC ಪರೀಕ್ಷೆ ಆರಂಭ

ಬೆಂಗಳೂರು ಮಾ.24: ರಾಜ್ಯದಲ್ಲಿ ಮಾ.31 ರಿಂದ ಏ.15 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದೆ.

ಮಾ.31 ರಿಂದ ರಾಜ್ಯದಾದ್ಯಂತ ಪರೀಕ್ಷೆ ಗಳು ಆರಂಭಗೊಳ್ಳಲಿದ್ದು ಎ.15 ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ಪರೀಕ್ಷೆಯನ್ನು ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸಿಆರ್ಪಿಸಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಒಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಪರೀಕ್ಷೆ ನಡೆಯಲಿರುವ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಜೆರಾಕ್ಸ್, ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು, ಮೊಬೈಲ್ ಬಳಕೆಯನ್ನು ನಿರ್ಬಂಧಿಸಲಾಗಿದೆ

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಲಿ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಪರೀಕ್ಷೆಗೆ ಕುರಿತಾದ ಯಾವುದೇ ಗೊಂದಗಳಿದ್ದರೆ ಸಹಾಯವಾಣಿ ಸಂಖ್ಯೆ 080-23310075/76 ಈ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಭಾನುವಾರ ಹಾಗೂ ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಹಾಗೂ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದು.

ಎಸ್.ಎಸ್.ಎಲ್.ಸಿ ಪರೀಕ್ಷಾ ಅಂತಿಮ ವೇಳಾ ಪಟ್ಟಿ ಹೀಗಿದೆ...

ಮಾ.31 – ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.

ಎ.4 -ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ.

ಎ.6- ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.

ಎ.10- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.

ಎ.12- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ..

ಎ.15 – ಸಮಾಜ ವಿಜ್ಞಾನ

2 thoughts on “ಮಾ. 31 ರಿಂದ SSLC ಪರೀಕ್ಷೆ ಆರಂಭ

Leave a Reply

Your email address will not be published. Required fields are marked *

error: Content is protected !!