ಶಿವಮೊಗ್ಗ: ಬೆಳ್ಳಂಬೆಳಿಗ್ಗೆ ರಕ್ತದ ಮಡುವಿನಲ್ಲಿ ಮಾಜಿ ಕಾನ್ಸ್ಟೇಬಲ್ ಶವ ಪತ್ತೆ
ಶಿವಮೊಗ್ಗ ಮಾ.25 : ಇಂದು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಮಾಜಿ ಪೊಲೀಸ್ ಕಾನ್ಸ್ಟೆಬಲ್ ವೊಬ್ಬರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಾಜಿ ಪೊಲೀಸ್ ಕಾನ್ಸ್ಟೆಬಲ್ ಪೂರ್ಣೇಶ್ ಮೃತ ಪಟ್ಟವರು. ರಕ್ತದ ಮಡುವಿನಲ್ಲಿ ಕಾನ್ಸ್ಟೇಬಲ್ ಮೃತದೇಹ ಪತ್ತೆಯಾಗಿದ್ದು, ಪೂರ್ಣೇಶ್ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಬಗ್ಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರು ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಸೇವೆ ಸಲ್ಲಿಸಿದ್ದರು. ಪೂರ್ಣೇಶ್ ಮದ್ಯ ವ್ಯಸನಿಯಾಗಿದ್ದು, ದುರ್ನಡತೆ ಕಾರಣದಿಂದ ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ವಜಾಗೊಂಡಿದ್ದರು ಎನ್ನಲಾಗಿದೆ.