ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಉಡುಪಿ: ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷರಾಗಿ ಎಚ್.ಆರ್. ಶಶಿಧರ್ ನಾಯಕ್ ಅವರು ಆಯ್ಕೆಯಾಗಿದ್ದಾರೆ. ಮಾಜಿ ಶಾಸಕ ಹಾಗೂ ಸಂಘದ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಅವರ ಅಧ್ಯಕ್ಷತೆಯಲ್ಲಿ ಹೊಸನಗರ ರಾಮಕ್ಷತ್ರಿಯ ಸಭಾಭವನದಲ್ಲಿ ನಡೆದ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಮಹಾಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ವೇಳೆ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಕುಂದಾಪುರ ಮೂಲದ ಚೆನ್ನಗಿರಿ ನಿವಾಸಿ ಹೊಸನಗರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಎಚ್.ಆರ್.ಶಶಿಧರ್ ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸಾಸ್ತಾನದ ವಕೀಲರಾದ ಶ್ರೀಧರ್ ಪಿ.ಎಸ್. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾರ್ಯಕಾರಿ ಮಂಡಳಿಯನ್ನು ರಚಿಸಲಾಯಿತು. ಈ ಸಂದರ್ಭ ಸಂಘದ ಅಧಿಕಾರಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.