ಸೌದಿ ಅರೇಬಿಯಾ : ಭೀಕರ ಅಪಘಾತ- 20 ಮಂದಿ ಉಮ್ರಾ ಯಾತ್ರಿಕರು ಮೃತ್ಯು

ಸೌದಿ ಅರೇಬಿಯಾ ಮಾ.28 : ಭೀಕರ ಬಸ್ ಅಪಘಾತದಲ್ಲಿ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದು,  29 ಮಂದಿ ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.

ಅಲ್ಲಿನ ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಬ್ರೇಕ್ ವೈಫಲ್ಯದ ಪರಿಣಾಮವಾಗಿ ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಉಮ್ರಾ ಯಾತ್ರಿಕರ ಬಸ್ ಸೇತುವೆಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 20 ಮಂದಿ ಸಾವನ್ನಪ್ಪಿ 29 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸೌದಿ ನಾಗರಿಕ ರಕ್ಷಣಾ ಮತ್ತು ರೆಡ್ ಕ್ರೆಸೆಂಟ್ ಪ್ರಾಧಿಕಾರದ ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!