`ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ನಡೆಸಿದರೆ 5 ವರ್ಷ ಜೈಲು ಶಿಕ್ಷೆ’ – ರೈಲ್ವೇ ಇಲಾಖೆ
ನವದೆಹಲಿ, ಮಾ.31 : ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವ ಕಿಡಿಗೇಡಿಗಳು ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ಎಚ್ಚರಿಕೆ ನೀಡಿದೆ.
ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಹಲವಾರು ಘಟನೆಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ. ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ಅಪರಾಧಿಗಳ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 153 ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು, ಇದು 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಗುರಿಯಾಗುತ್ತದೆ ಹೇಳಲಾಗಿದೆ.