ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ: ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು ಮಾ.31: ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸತೀಶ್, ವಿಜಯ್, ಶ್ರೀಧರ್ ಹಾಗೂ ಕಿರಣ್ ಬಂಧಿತ ಆರೋಪಿಗಳು. 

ಮಾರ್ಚ್ 25ರಂದು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್‌ನಲ್ಲಿ ಯುವತಿ, ಸ್ನೇಹಿತನನ್ನು ಭೇಟಿಯಾಗಿ, ಮಾತುಕತೆಯಲ್ಲಿ ತೊಡಗಿದ್ದರು. ಇದೇ ವೇಳೆ ತಡರಾತ್ರಿ ಇಬ್ಬರೂ ಪಾರ್ಕ್‌ನಲ್ಲಿ ಕುಳಿತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಆರೋಪಿಗಳು, ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಎಳೆದೊಯ್ದಿದ್ದು ಚಲಿಸುತ್ತಿದ್ದ ಕಾರಿನಲ್ಲೇ ಆರೋಪಿಗಳು ಅತ್ಯಾಚಾರ ಮಾಡಿರುವುದಾಗಿ ಯುವತಿ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅತ್ಯಾಚಾರದ ಬಳಿಕ ಆರೋಪಿಗಳು ಸಂತ್ರಸ್ತೆಯನ್ನು ಮನೆ ಬಳಿ ಬಿಟ್ಟು ಹೋಗಿದ್ದರು. ಸಂತ್ರಸ್ತೆಯು ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!