ಕೋಟ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಕೋಟ ಎ.1(ಉಡುಪಿ ಟೈಮ್ಸ್ ವರದಿ): ಕೋಟತಟ್ಟು ಗ್ರಾಮದ ಕೋಟಿಮನೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ರಮೇಶ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಕೋಟತಟ್ಟು ಗ್ರಾಮದ ಕೋಟಿಮನೆ ಎಂಬಲ್ಲಿ ವಾಸವಾಗಿದ್ದ ಇವರು ನಿನ್ನೆ ದಿನ ಬೆಳಿಗ್ಗೆ ವಿಪರೀತ ಮದ್ಯಪಾನ ಮಾಡಿ ಮನೆಯ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಬಳಿಕ ಸಂಜೆ ಆದರೂ ಬಾಗಿಲು ತೆಗೆಯದ ಕಾರಣ ಮನೆಯವರು ಹೋಗಿ ನೋಡಿದಾಗ ಅವರು ನೇಣು ಹಾಕಿಕೊಂಡಿರುವುದು ತಿಳಿದುಬಂದಿದೆ. ಕೂಡಲೇ ಅವರನ್ನು ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ರಮೇಶ ಪೂಜಾರಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಪತ್ನಿ ವನಜ ಅವರು ನೀಡಿದ ಮಾಹಿತಿಯಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.