ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ- ಸಿದ್ದರಾಮಯ್ಯ
ಬೆಂಗಳೂರು ಎ.4: ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆ ನೀಡಲಾರದು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂಬುದಾಗಿ ಮಾಧ್ಯಮವೊಂದು ವರದಿ ಮಾಡಿದೆ
ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ಪೈಪೋಟಿ ನಡೆಯುತ್ತಿದೆ. ಈ ಬಗ್ಗೆ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು, ನಾನು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ. ಡಿಕೆ ಶಿವಕುಮಾರ್ ಅವರೂ ಆಕಾಂಕ್ಷಿ. ಆದರೆ, ಅವರಿಗೆ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆ ನೀಡಲಾರದು ಎಂದು ಹೇಳಿದ್ದಾರೆ ಎನ್ನಲಾಗಿದೆ.
ಕರ್ನಾಟಕ ರಾಜಕಾರಣದಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಡಿಕೆ ಶಿವಕುಮಾರ್ 2020ರಲ್ಲಿ ದಿನೇಶ್ ಗುಂಡೂರಾವ್ ಅವರ ನಂತರ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಿರಿಯ ವ್ಯಕ್ತಿಗೆ ಉನ್ನತ ಹುದ್ದೆಯ ಅವಕಾಶ ಯಾಕೆ ನೀಡಬಾರದು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಇದು ತಾನು ಸ್ಪರ್ಧಿಸುವ ಕೊನೆಯ ಚುನಾವಣೆ ಎಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.