ಉಡುಪಿ: ಗಾಂಜಾ ಸೇವನೆ – ಇಬ್ಬರು ವಶಕ್ಕೆ
ಉಡುಪಿ ಎ.5(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿಯ 80 ನೇ ಬಡಗುಬೆಟ್ಟು ಗ್ರಾಮದ ಸೈಲೆಂಟ್ ಮೆಡೋಸ್ ಅಪಾರ್ಟ್‌ಮೆಂಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಕುಮಾರ್ ಎಂಬಾತನನ್ನು ಹಾಗೂ ಹೆರ್ಗಾ ಗ್ರಾಮದ ಪಂಚಾಜನ್ಯ ರೆಸಿಡೆನ್ಸಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ರಾಮ್ ಬಹುದ್ದೂರ್ ಸರ್ಕಿ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಇವರಿಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.