ಯಾದಗಿರಿ: ಮುಚ್ಚಿರುವ ಅಂಗನವಾಡಿ ಶೀಘ್ರ ತೆರೆಯುವಂತೆ ಅಧಿಕಾರಿಗಳಿಗೆ ಅರುಣ್ ಕಲ್ಗೆದ್ದೆ ಸೂಚನೆ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪುರಸಭಾ ಇಂದಿರ ನಗರ ಬುಡ ಜಂಗಮ ಜನಾಂಗದ ಕಾಲೋನಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಅರುಣ್ ಕುಮಾರ್ ಕಲ್ಗೆದ್ದೆಅವರು ಭೇಟಿ ನೀಡಿದರು. ಈ ವೇಳೆ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮೂಲಭೂತ ಸೌಕರ್ಯಗಳಾದ ಶೌಚಾಲಯ, ವಸತಿ, ವಿದ್ಯುತ್, ರಸ್ತೆ, ಪಡಿತರ ಆಹಾರ ವಂಚಿತರಾಗಿದ್ದವರಿಗೆ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ  ಶಿಕ್ಷಕಿ ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಮುಚ್ಚಿರುವ 200 ಮಕ್ಕಳಿರುವ ಇಲ್ಲಿನ ಅಂಗನವಾಡಿ ಕೇಂದ್ರವನ್ನು ಶೀಘ್ರ ತೆರೆಯುವಂತೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ, ಇದೆ ಸಂದರ್ಭದಲ್ಲಿ ಪುರಸಭಾ ವ್ಯಾಪ್ತಿಯ ದೇವರಾಜು ಅರಸು ಹುಡುಗರ ಮತ್ತು ಹುಡುಗಿಯರ ಹಾಸ್ಟೆಲ್ ಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಹಭೋಜನ ಮಾಡಿದರು. ಜೊತೆಗೆ ಅಲ್ಲಿನ ಆಹಾರ ಮತ್ತು ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭ ಪುರಸಭಾ ಕಾರ್ಯನಿರ್ವಾಣಾಧಿಕಾರಿ ಶರಣಪ್ಪ ಮಡಿವಾಳರ ಜೊತಗಿದ್ದರು. 

Leave a Reply

Your email address will not be published. Required fields are marked *

error: Content is protected !!