ತಂದೆ ಚಲಾಯಿಸುತ್ತಿದ್ದ ಲಾರಿ ಚಕ್ರದಡಿ ಸಿಲುಕಿ ಬಾಲಕ ದುರ್ಮರಣ
ಬೆಳ್ತಂಗಡಿ: ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿದ ಎಂಟರ ಹರೆಯದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಮೂಡುಬಿದಿರೆಯಲ್ಲಿ ಮಾ.10 ರ ಸಂಜೆ ನಡೆದಿದೆ.
ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಮುರ್ಷಿದ್ (8) ಮೃತಪಟ್ಟ ಬಾಲಕ. ಈತ ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದ. ಇಬ್ರಾಹಿಂ ಮೂಡುಬಿದ್ರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ ತಂದೆಯ ಜೊತೆಗೆ ತೆರಳಿದ್ದನೆಂದು ಹೇಳಲಾಗಿದೆ. ಈ ವೇಳೆ ತಂದೆ ಲಾರಿ ಚಲಾಯಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ತಕ್ಷಣ ಬಾಲಕನನ್ನು ಮೂಡುಬಿದಿರೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬಾಲಕ ಅದಾಗಲೇ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.