ಉಡುಪಿ: ಗಾಂಜಾ ಸೇವನೆ-ಇಬ್ಬರು ವಿರುದ್ಧ ಪ್ರಕರಣ

ಉಡುಪಿ ಎ.18 (ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ವಿರುದ್ಧ ಉಡುಪಿ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಡುಪಿಯ ಶಿವಳ್ಳಿ ಗ್ರಾಮದ ಅಪಾರ್ಟ್‍ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಮೊಹಮ್ಮದ್ ಇಮಾದ್ ಹಾಗೂ ಜೋಯ್ ರಾಥಿ ಎಂಬ ಇಬ್ಬರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ಉಡುಪಿ ಸೆನ್ ಠಾಣಾ ಪೊಲೀಸರು ವಶಕ್ಕೆ ಪಡೆದು ಮಣಿಪಾಲದ ಫರೆನ್ಸಿಕ್ ವೈದ್ಯರ ಬಳಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈ ಇಬ್ಬರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಇಬ್ಬರ ವಿರುದ್ಧ ಉಡುಪಿ ಸೆನ್ ಅಪರಾಧ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!