ಆಗ್ರಾ: ಟ್ರಕ್ ಮತ್ತು ಕಾರು ಮುಖಾಮುಖಿ ಎಂಟು ಮಂದಿ ಸಾವು

ಆಗ್ರಾ: ಟ್ರಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಇಂದು (ಮಾ.11) ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


   ನಾಗಾಲ್ಯಾಂಡ್ ನಿಂದ ಬರುತ್ತಿದ್ದ ಟ್ರಕ್ ಮತ್ತು ಜಾಖರ್ಂಡ್ ನ ದಾಖಲಾತಿ ಸಂಖ್ಯೆ ಹೊಂದಿರುವ ಕಾರು ನಡುವೆ ಅಪಘಾತ ಸಂಭವಿಸಿದೆ ಎಂದು ಬೊಟ್ರೆ ಸಿಟಿ ಎಸ್ಪಿ ರೋಹನ್ ಪ್ರಮೋದ್ ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. 

Leave a Reply

Your email address will not be published. Required fields are marked *

error: Content is protected !!