ಉಡುಪಿ: ಅನಾರೋಗ್ಯದ ಕಾರಣ -ಮೂವರು ಮೃತ್ಯು

ಉಡುಪಿ ಎ.18 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ವಿವಿಧ ತಾಲೂಕು ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಅಸ್ವಸ್ಥಗೊಂಡು ಸಾವನ್ನಪ್ಪುತ್ತಿರುವವರ ಸಂಖ್ಯೆ ಕಳೆದೆರಡು ದಿನಗಳಿಂದ ಹೆಚ್ಚಾಗಿ ದಾಖಲಾಗುತ್ತಿದೆ.

ಕಳೆದೆರಡು ದಿನಗಳಿಂದ ಒಟ್ಟು 6 ಮಂದಿ ಅನಾರೋಗ್ಯದಿಂದ ಅಸ್ವಸ್ಥಗೊಂಡು ಮೃತಪಟ್ಟಿರುವ ಬಗ್ಗೆ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಇಂದು ಮತ್ತೆ ಮೂರು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಚೇತನ ಕುಮಾರ್ (51), ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಪಿಯೂಸ್ ಮಸ್ಕರೇನಸ್ (68) ಹಾಗೂ ಉಡುಪಿಯ 76-ಬಡಗುಬೆಟ್ಟು ಗ್ರಾಮದ ಅಪ್ಪದೊರೈ (47) ಎಂಬವರ ತಮಗಿದ್ದ ಅನಾರೋಗ್ಯ ಸಮಸ್ಯೆಯಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ, ಬ್ರಹ್ಮಾವರ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದರಂತೆ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!