ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಹಿಳೆ ಬಂಧನ
ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಸರಗೋಡು ಮೂಲದ ಮೊಹಮ್ಮದ್ ಅಲಿ ಸಮೀರಾ ಬಂಧಿತ ಮಹಿಳೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿತ್ತು. ಈ ವೇಳೆ, ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯೊಬ್ಬರು ತಮ್ಮ ಒಳ ಉಡುಪು ಸೇರಿದಂತೆ, ಸ್ಯಾನಿಟರಿ ಪ್ಯಾಡ್ ಹಾಗೂ ಸಾಕ್ಸ್ನ ಒಳಗಡೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ.
ಬಂಧಿತ ಮಹಿಳೆಯಿಂದ 1.10 ಕೋಟಿ ರೂ. ಮೌಲ್ಯದ 2.41 ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಕೋಪ್ಟಾ ನಿಯಮಗಳನ್ನು ಉಲ್ಲಂಘಿಸುವ ವಿದೇಶಿ ಮೂಲದ ಸಿಗರೇಟ್ಗಳನ್ನು ಸಹ ಮಹಿಳೆಯಿಂದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.