ಮಂಗಳೂರು: ಹೆಚ್ಚಿದ ಕೊರೋನಾ ಪ್ರಕ್ರರಣ ಯೆನೆಪೋಯ ಕಾಲೇಜುಗಳು ತಾತ್ಕಾಲಿಕ ಬಂದ್

ಮಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಮತ್ತೆ ಏರುತ್ತಿದೆ. ಇದರೊಂದಿಗೆ ಕರಾವಳಿಯಲ್ಲೂ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿರುವ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿದೆ. ಈ ನಡುವೆ ಮಂಗಳೂರಿನ ದೇರಳಕಟ್ಟೆಯ ಯೆನೆಪೋಯ ವಿವಿ ಕ್ಯಾಂಪಸ್‍ನಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿದ್ದು, ಇಲ್ಲಿಯವರೆಗೆ ಒಟ್ಟು 20 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ನರ್ಸಿಂಗ್ ಸೇರಿದಂತೆ 9 ಕಾಲೇಜುಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ವಿದ್ಯಾರ್ಥಿಗಳ ಕಲಿಕಾ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ನಡೆಸಲಾಗುತ್ತದೆ ಎಂದು ತಿಳಿದು ಬಂದಿದ್ದು, ವಿಶ್ವ ವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರು ಪರೀಕ್ಷೆಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!