ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ರೈಡ್- ಗಿಡದಲ್ಲಿ ನೇತು ಹಾಕಿದ್ದ 1 ಕೋ.ರೂ. ವಶ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ  ಸಹೋದರನ ಮನೆಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು 1 ಕೋ. ರೂ. ವಶಪಡಿಸಿಕೊಂಡಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿಯ ಸಹೋದರ ಮೈಸೂರಿನಲ್ಲಿ ಇರುವ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಮರದಲ್ಲಿ ನೇತು ಹಾಕಿದ್ದ ಹಣವನ್ನು ವಶಪಡಿಸಿಕೊಂಡಿರುವ ಫೋಟೋಗಳು ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಐಟಿ ದಾಳಿಗೆ ಒಳಗಾಗಿರುವ ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!