ಕಾರ್ಕಳ: ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ

ಕಾರ್ಕಳ ಮೇ.4(ಉಡುಪಿ ಟೈಮ್ಸ್ ವರದಿ): ಮಾತ್ರೆಯನ್ನು ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಜಯಲಕ್ಷ್ಮಿ  ನಾಯಕ್(57) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಬೆಳಿಗ್ಗೆ ಮನೆಯಲ್ಲಿ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಬೆಳಗ್ಗಿನ ಜಾವ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರು ಮಗನ ಮದುವೆ ನಿಗದಿಯಾಗಿದ್ದು ಅದೇ ಕಾರಣಕ್ಕೆ ಬೇಸರದಿಂದ ಇದ್ದು ತಾನು ಸಾಯುತ್ತೇನೆಂದು ಹೇಳುತ್ತಿದ್ದರು. ಅದರಂತೆ ಮೇ.3 ರಂದು ಬೆಳಿಗ್ಗೆ ಅನಗತ್ಯ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಪತಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!