ಮಣಿಪಾಲ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಮಣಿಪಾಲ ಮೇ.4( ಉಡುಪಿ ಟೈಮ್ಸ್ ವರದಿ):‌ ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಯಪ್ರಕಾಶ್‌ (60 ) ಆತ್ಮಹತ್ಯೆ ಮಾಡಿಕೊಂಡವರು. ನಗರ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಎಇಇ ಆಗಿದ್ದ ಇವರು ನಿವೃತ್ತ ಜೀವನ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇಂದು ಬೆಳಗ್ಗೆ ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಜಯಪ್ರಕಾಶ್ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಮಗ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!