ಕಾರ್ಕಳ: ಜೀವನದಲ್ಲಿ ಜಿಗುಪ್ಸೆ ಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ( ಉಡುಪಿ ಟೈಮ್ಸ್ ವರದಿ): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಲ್ಯಾ ಗ್ರಾಮದಲ್ಲಿ ನಡೆದಿದೆ.

ವಿಶಾಕ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡವರು. ಮಾ.18 ರಂದು ಬೆಳೆ ರಕ್ಷಣೆಗಾಗಿ ಹೊಂದಿದ್ದ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!