“ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ” ಟ್ವಿಟ್ ನಲ್ಲಿ ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಆರಂಭದಿಂದಲೂ ರಾಜ್ಯ ರಾಜಕಾರಣ ದಲ್ಲಿ ರಾಜಕೀಯ ಕೆಸರೆರೆಚಾಟ ನಡೆಯುತ್ತಲೇ ಇದೆ. ಇದೀಗ ಇದರ ಮುಂದುವರೆದ ಭಾಗ ಎಂಬಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತಾಗಿ ಟ್ವೀಟ್ ಮಾಡಿದ್ದು, ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚೊ ಬಿಜೆಪಿ ನಾಯಕರ ಮಾನ ಮುಚ್ಚೊಕ್ಕೆ 90 ಜೊತೆ ಬಟ್ಟೆ ಖರೀದಿಸಿದ್ದೀನಿ ಎಂದು ವ್ಯಂಗ್ಯವಾಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಿಗೆ ಕೂಡಾ ಎಂದು ಬರೆದುಕೊಂಡಿದ್ದಾರೆ

ಇನ್ನು ಮಾಸ್ಕಿಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲೇ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಖರೀದಿಸಿರುವುದಾಗಿ ವ್ಯಂಗ್ಯವಾಡಿದ್ದರು. ಈ ಮಾತಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ರೀತಿ ಬಿಜೆಪಿ ನಾಯಕರ ಕುರಿತು ವ್ಯಂಗ್ಯವಾಡಿ ಟ್ವೀಟ್ ನಲ್ಲಿ ಬರಹವೊಂದನ್ನು ಪೋಸ್ಟ್ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!