ಚಿತ್ರದುರ್ಗ: ಸರಣಿ ಅಫಘಾತ ಮೂವರು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನ ಕೆ.ಆರ್.ಹಳ್ಳಿ ಗೇಟ್ ಬಳಿ ಇಂದು (ಮಾ.22) ನಡೆದ ಬೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹೊಸದುರ್ಗ ನಿವಾಸಿ ನೇಮಿರಾಜ್(58), ನಂದಾ(53), ರಂಗ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ರಸ್ತೆ ಡಿವೈಡರ್ ದಾಟಿ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಇಟಿಯೋಸ್ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಅಪಘಾತದಿಂದ ವಾಹನಗಳು ಜಖಂ ಗೊಂಡಿದ್ದು, ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.