ಸನ್ಮಾನದ ಹಾರ-ತುರಾಯಿ, ಶಾಲು ಸ್ವೀಕರಿಸಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು ಮೇ 22 : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ನೂತನ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.ʼ ಎಂದು ಅವರು ಹೇಳಿದ್ದಾರೆ.
ಹಾಗೂ ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.