ಹಿಂದಿನ‌ ಸರಕಾರದ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ತಡೆ ಹಿಡಿಯಲು ನಿರ್ದೇಶನ

ಉಡುಪಿ ಮೇ 22(ಉಡುಪಿ ಟೈಮ್ಸ್ ವರದಿ): ಸರ್ಕಾರದ ಎಲ್ಲಾ ಇಲಾಖೆಗಳು/ನಿಗಮ/ಮಂಡಳಿ/ಪ್ರಾಧಿಕಾರಗಳ ಹಿಂದಿನ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರಕಾರ ನಿರ್ದೇಶನ ನೀಡಿದೆ. 

ಈ ಬಗ್ಗೆ ಆರ್ಥಿಕ ಇಲಾಖೆಯ ಸರಕಾರಿ ಕಾರ್ಯದರ್ಶಿ ಡಾ. ಏಕ್ ರೂಪ್ ಕೌರ್ ಅವರು ಆದೇಶ ಹೊರಡಿಸಿ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!