ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 23: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು, ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಉನ್ನತ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, 4 ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ರಿ ಎಂದು ಗೊತ್ತಿದೆ, ಆ ತಪ್ಪು ಮರುಕಳಿಸಬಾರದು, ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಡಗ್ಸ್ ಮಾಫಿಯಾ, ರೌಡಿಸಂ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಯಾರಿಗೂ ತಾರತಮ್ಯ ಮಾಡದೇ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.