ಬೈಂದೂರು: ನಿರುದ್ಯೋಗದ ಕಾರಣ- ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಬೈಂದೂರು ಮೇ 28( ಉಡುಪಿ ಟೈಮ್ಸ್ ವರದಿ): ನಿರುದ್ಯೋಗದ ಕಾರಣ ಮನನೊಂದು ಡೆತ್ ನೋಟ್ ಬರೆದಿಟ್ಟು  ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು. ಎಂ.ಕಾಂ ಪದವೀಧರೆ ಯಾಗಿದ್ದ ಇವರು ಸ್ಪರ್ಧಾತ್ಮಕ ಪರೀಕ್ಷೆ ಬರೆದರೂ ಉದ್ಯೋಗ ಸಿಗದ ಕಾರಣ ಮನನೊಂದು ಡೆತ್ ನೋಟ್ ಬರೆದಿಟ್ಟು ನಿನ್ನೆ ಮಧ್ಯಾಹ್ನದಿಂದ ಸಂಜೆಯ ಅವಧಿಯಲ್ಲಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮತರ ಸಂಬಂಧಿಸಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!