ಮಣಿಪಾಲ: ಹೆರ್ಗಾದ ಅಪಾರ್ಟ್ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ- ಪೊಲೀಸ್ ದಾಳಿ – ಇಬ್ಬರು ಪರಾರಿ

ಮಣಿಪಾಲ ಮೇ 31(ಉಡುಪಿ ಟೈಮ್ಸ್ ವರದಿ): ಹೆರ್ಗಾ ಗ್ರಾಮದ ಈಶ್ವರ ನಗರದ ಅಪಾರ್ಟಮೆಂಟ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಮಣಿಪಾಲ ಪೊಲೀಸರು ದಾಳಿ ಮಾಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ನಿನ್ನೆ ಉಡುಪಿಯ ಹೆರ್ಗಾ ಗ್ರಾಮದ ಈಶ್ವರ ನಗರದ ಅಪಾರ್ಟಮೆಂಟ್ ವೊಂದಕ್ಕೆ ದಾಳಿ ಮಾಡಿದ್ದರು. ಈ ವೇಳೆ ರೂಮ್ ವೊಂದರಲ್ಲಿ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ದಾಳಿ ವೇಳೆ ಪಯಾಜ್‌ ಮತ್ತು ಸಚಿನ್‌ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!