ಪ್ರಿಯಾಂಕ್‌ ಖರ್ಗೆ,ಎಂ.ಬಿ. ಪಾಟೀಲ್‌‌ಗೆ ಹೆಚ್ಚುವರಿ ಖಾತೆ

ಬೆಂಗಳೂರು ಮೇ 31 : ಸಚಿವರಾದ ಎಂ.ಬಿ ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿ ಖಾತೆಯನ್ನು ನೀಡಲಾಗಿದೆ. 

ಸಿಎಂ ಸಿದ್ದರಾಮಯ್ಯ ಅವರ ಬಳಿಯಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದ್ದು, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಯ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಐಟಿ, ಬಿಟಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!