ಕಾಪು: ವ್ಯಕ್ತಿ ನಾಪತ್ತೆ
ಕಾಪು ಜೂ.2(ಉಡುಪಿ ಟೈಮ್ಸ್ ವರದಿ): ಉದ್ಯಾವರ ಪೇಟೆಗೆ ಹೋಗುತ್ತೇನೆ ಎಂದು ಹೇಳಿ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಉದ್ಯಾವರ ಗ್ರಾಮದ ಗಣೇಶ ನಗರ ನಿವಾಸಿ ಅಶೋಕ (47) ನಾಪತ್ತೆಯಾಗಿರುವವರು. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಅವರು, ನಿನ್ನೆ ಸಂಜೆ ತಮ್ಮ ಕೆಲಸ ಮುಗಿಸಿ ಮನೆಗೆ ಬಂದವರು ಮತ್ತೆ ಉದ್ಯಾವರ ಪೇಟೆಗೆ ಹೋಗಿ ಬರುತ್ತೇನೆಂದು ಸ್ವರೂಪ ಎಂಬುವವರ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಹೋದವರು ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ನೆರೆಕೆರೆಯವರನ್ನು ಹಾಗೂ ಸಂಬಂಧಿಕರನ್ನು ವಿಚಾರಿಸಿದರೂ ಯಾವುದೇ ಸುಳಿವು ಸಿಕ್ಕಿರುವುದಿಲ್ಲ ಎಂಬುದಾಗಿ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಅಶೋಕ ಅವರ ಸಂಬಂಧಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.