ಮಣಿಪಾಲ: ಗಾಂಜಾ ಸೇವನೆ- ನಾಲ್ವರ ವಿರುದ್ಧ ಪ್ರಕರಣ
ಮಣಿಪಾಲ ಜೂ.2(ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಠಾಣೆಯಲ್ಲಿ ನಾಲ್ವರು ಯುವಕರ ವಿರುದ್ಧ ದೂರು ದಾಖಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಅಪಾರ್ಟ್ಮೆಂಟ್ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಕಾಂತೇಶ್ ವಿ ಕಸ್ತೂರಿ (25), ಕಿರಣ್ ಪಾಟೀಲ್ ಎಸ್ ವಿ (26), ರಾಕೇಶ್ ಗೌಳಿ (27), ಸುದೀಪ್ ಜೆ (26) ಎಂಬ ನಾಲ್ವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ಮಣಿಪಾಲದ ಫಾರೆನ್ಸಿಕ್ ವಿಭಾಗದ ವೈದ್ಯರ ಬಳಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ನಾಲ್ವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಇವರ ವಿರುದ್ಧ ಮಣಿಪಾಲ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಾಗಿದೆ.