ಉಡುಪಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು
ಉಡುಪಿ ಜೂ.4(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದಿಂದ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೊಹಮ್ಮದ್ ಅಬ್ದುಲ್ ಕಲಾಂ (53) ಮೃತಪಟ್ಟವರು. 3 ವಾರಗಳ ಹಿಂದೆ ಉಡುಪಿ ಡಯಾನ ಬಳಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಇಂದು ಬೆಳಗಿನ ಜಾವ ಅನಾರೋಗ್ಯದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಮೊಹಮ್ಮದ್ ಅಬ್ದುಲ್ ಕಲಾಂ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.