ಯುವತಿಯೊಂದಿಗೆ ಅಸಭ್ಯ ವರ್ತನೆ, ಹಣ ದೋಚಿ ಪರಾರಿಯಾಗಿದ್ದಆರೋಪಿಗಳ ಬಂಧನ
ಬಜ್ಪೆ: ಕೆಲಸ ಮುಗಿಸಿ ಬರುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್ ಕುಮಾರ್ ಬಂಧಿತ ಆರೋಪಿಗಳು.
ಮಾ.23 ರಂದು ಜೋಕಟ್ಟೆಯ ಸಂಕದಡಿಯ ಹೊಸಮನೆಯ ನಿವಾಸಿಯಾಗಿದ್ದ ಯುವತಿಯೊಬ್ಬರು ರಾತ್ರಿ 7.30ಕ್ಕೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮನೆಯ ಬಳಿ ಅಪರಿಚಿತರಿಬ್ಬರು ಅವರೊಂದಿಗೆ ಅಸಭ್ಯವಾಗಿ ವರ್ತಿಸಿ ಅವರ ಕೈಯಲ್ಲಿದ್ದ 1 ಸಾವಿರ ಹಣವಿದ್ದ ಪರ್ಸ್’ನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಮಾ.24 ರಂದು ಇಬ್ಬರು ಆರೋಪಿಗಳನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.