ಕಾರ್ಕಳ: ಅಪರಿಚಿತ ವಾಹನ ಡಿಕ್ಕಿ-ದ್ವಿಚಕ್ರ ವಾಹನ ಸವಾರ ಮೃತ್ಯು
ಕಾರ್ಕಳ ಜೂ.5(ಉಡುಪಿ ಟೈಮ್ಸ್ ವರದಿ): ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡಾರು-ಬಜಗೋಳಿ ಡಾಮಾರು ರಸ್ತೆಯ ದಿಡಿಂಬಿರಿ ಗರಡಿಯ ಎದುರು ನಡೆದಿದೆ.
ಮಾಳ ಮಲ್ಲಾರಿನ ಶಿವಕುಮಾರ್ ಮೃತಪಟ್ಟವರು. ಜೂ.4 ರಂದು ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆಯಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಬಿದ್ದಿದ್ದ ಇವರನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ನವೀನ ಎಂಬವರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿ ಆಗದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.