ಮಣಿಪಾಲ: ಗಾಂಜಾ ಸೇವನೆ- ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ ಜೂ.6(ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ.

ಮಣಿಪಾಲ ಠಾಣಾ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ, ಈಶ್ವರ ನಗರದ ಅಪಾರ್ಟಮೆಂಟ್‌ವೊಂದರ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಜೋಷೆಪ್‌ ಟೊನಿಯೊ (20) , ವರುಣ್‌ ಮೆಹ್ತಾ (21), ವಾರುನೆ ಕುಶಾಲ್‌ (21), ನಮನ್‌ ಸೋನಿ (20) ಎಂಬ ನಾಲ್ವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ಮಣಿಪಾಲ ಫಾರೆನ್ಸಿಕ್ ವಿಭಾಗದ ವೈದ್ಯರ ಬಳಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ನಾಲ್ವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಇವರ ವಿರುದ್ಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!