ಮಲ್ಪೆ: ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು
ಮಲ್ಪೆ ಜೂ.7(ಉಡುಪಿ ಟೈಮ್ಸ್ ವರದಿ): ಮನೆಯ ರಿಪೇರಿ ಕೆಲಸ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಶ್ವನಾಥ(37) ಮೃತಪಟ್ಟವರು. ಇವರು ಎ.18 ರಂದು ನೇಜಾರಿನ ಮೇಘರಾಜ್ ಎಂಬುವವರ ಮನೆಯ ಮಹಡಿಯ ರಿಪೇರಿ ಕೆಲಸ ಮಾಡುತ್ತಿದ್ದಾಗ ಬೆಳಿಗ್ಗೆ ಮನೆಯ ಮಹಡಿಯಿಂದ ಆಯತಪ್ಪಿ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡುಹೋಗಿ ಚಿಕಿತ್ಸೆ ನೀಡಿಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.