ಬ್ರಹ್ಮಾವರ: ವಿಶ್ವ ಆಹಾರ ಸುರಕ್ಷತಾ ದಿನಾಚರಣೆ

ಬ್ರಹ್ಮಾವರ ಜೂ.8(ಉಡುಪಿ ಟೈಮ್ಸ್ ವರದಿ): ಇಲ್ಲಿನ  ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ಕಲುಷಿತ ಆಹಾರ ಸೇವನೆಯಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಲು ಮತ್ತು ಆಹಾರದ ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಲು ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಯಿತು. 

ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವೆಂದು ವಿಶ್ವ ಆರೋಗ್ಯ ಸಂಸ್ಥೆಯು ಆಚರಿಸುತ್ತದೆ. ಇದರ ಮುಖ್ಯ ಉದ್ದೇಶ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದಾಗಿದೆ. ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಆಹಾರದ ಸುರಕ್ಷತೆ ಕುರಿತು ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ಅವರು, ವಿದ್ಯಾರ್ಥಿಗಳಲ್ಲಿ ಆಹಾರ ಜಾಗೃತಿಯ ಕುರಿತು ಮಾತನಾಡಿದರು. 

ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಹೀನಾ ಕೌಸರ್ ಆಹಾರ  ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಹಾರ ತಂತ್ರಜ್ಞಾನ ವಿಭಾಗದ ಉಪನ್ಯಾಸಕಿಯಾದ ವಿನಂತಿ ಮತ್ತು ಶ್ರೀ ಲಕ್ಷ್ಮೀ,  ಆಹಾರ ತಂತ್ರಜ್ಞಾನದ ವಿದ್ಯಾರ್ಥಿ ದೀಪಿಕಾ, ಪ್ರಾಂಜಲಿ ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!