ಕಾಮುಕನಿಂದ ಅಸಭ್ಯ ವರ್ತನೆ- ವ್ಯಕ್ತಿಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು!
ಕುಂದಾಪುರ, ಜೂ.9: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಚಪ್ಪಲಿ ಏಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ಕುಂದಾಪುರದ ಬಿಜಾಡಿ ವಕ್ವಾಡಿಯಲ್ಲಿ ನಡೆದಿದೆ.
ವಕ್ವಾಡಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ಬಾರ್ಕೂರಿನ ನಜೀರ್ (35) ಪ್ರಕರಣದ ಆರೋಪಿ.
ತಾಲೂಕಿನ ಬಿಜಾಡಿ ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿಗೆ ತೆರಳುತ್ತಿದ್ದ ಸಂದರ್ಭ ಹಿಂಬಾಲಿಸಿ ಬಂದ ಆರೋಪಿ ನಜೀರ್ ಆಕೆಗೆ ಕಿರುಕುಳ ನೀಡಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಕೂಗಿದ್ದನ್ನು ಕೇಳಿ ಕೂಡಲೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿಬಂದು ಆರೋಪಿಯನ್ನು ಹಿಡಿದುಕೊಂಡಿದ್ದು ವಿಚಾರಿಸಿದಾಗ ವಿದ್ಯಾರ್ಥಿನಿ ನಡೆದ ಘಟನೆ ವಿವರಿಸಿದ್ದಾಳೆ. ಹಾಗೂ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದಾಳೆ. ಬಳಿಕ ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.