ಮಂಗಳೂರು: ಅಕ್ರಮ ಚಿನ್ನ ಸಾಗಾಟ ಆರೋಪಿ ಬಂಧನ
ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಸರಗೋಡು ಮೂಲದ ಇಸ್ಮಾಯಿಲ್ ಅಹಮದ್ ಕಲ್ಲಾರ್ ಬಂಧಿತ ಆರೋಪಿ. ದುಬೈನಿಂದ ಹೊರಟ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಇಸ್ಮಾಯಿಲ್ ಬಳ ಒಳ ಉಡುಪುಗಳಲ್ಲಿ ಸರಪಳಿಯ ರೀತಿಯಲ್ಲಿ 57,14,940 ರೂ. ಮೌಲ್ಯದ 1.23 ಕೆ.ಜಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಆರೋಪಿಯ ವಿರುದ್ಧ ಅಕ್ರಮ ಚಿನ್ನ ಸಾಗಾಟದ ದೂರು ದಾಖಲಾಗಿದೆ.