ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ಗೆ ಕಡಿವಾಣ- ಪ್ರಿಯಾಂಕ್ ಖರ್ಗೆ

ಕಲಬುರಗಿ ಜೂ.11 : ಸಾಮಾಜಿಕ ಜಾಲತಾಣದಲ್ಲಿ ಹರಡುವ ಅವಹೇಳನಕಾರಿ ಪೋಸ್ಟ್‌ಗಳಿಗೆ ಕಡಿವಾಣ ಹಾಕಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ ಖರ್ಗೆ ಹೇಳಿದರು.

ಇಂದು ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪ್ರಮುಖ 5 ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ “ಶಕ್ತಿ” ಯೋಜನೆಗೆ ಚಾಲನೆ ನೀಡಿದ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಸಮಾಜದ ಅಶಾಂತಿಗೆ ಕಾರಣಾಗುವುದನ್ನು ಕಂಡು ನಮ್ಮ ಸರ್ಕಾರ ಸುಮ್ಮನೆ ಕೂಡುವುದಿಲ್ಲ. ಇದಕ್ಕೆಲ್ಲ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರವೇ ಕಡಿವಾಣ ಹಾಕಲಾಗುವುದು. ಇದು ತಮ್ಮ ಇಲಾಖೆಯ ವ್ಯಾಪ್ತಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದರು.

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸಾರ್ವಜನಿಕರ ಅವಾಹಲು ಸ್ವೀಕರಿಸಿದರು. ಹಾಗೂ ಈ  ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜನರ ಸಮಸ್ಯೆ ಆದಷ್ಟು ಬೇಗ ಬಗೆ ಹರಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!