ಕಲಬುರಗಿ:ಬಿಸಿಲಿನ ತೀವ್ರತೆಗೆ ಟ್ರ್ಯಾಕ್ಟರ್ ನ ಟೈರ್ ಸ್ಫೋಟ: ಮಹಿಳೆ ಸಾವು ,ಹಲವರ ಸ್ಥಿತಿ ಗಂಭೀರ

ಕಲಬುರಗಿ: ಟೈರ್ ಸ್ಪೋಟಗೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕಲ್ಲೂರು ರೋಡ್ ಗ್ರಾಮದ ಸಮೀಪ ಇಂದು (ಮಾ.27) ಮಧ್ಯಾಹ್ನ ನಡೆದಿದೆ. ಸೇಡಂ ತಾಲೂಕಿನ ಮಳಖೇಡ ಗ್ರಾಮದ ಯಲ್ಲಮ್ಮ ಭೀಮರಾವ್ (40) ಮೃತಪಟ್ಟವರು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಂಚೋಳಿ ತಾಲೂಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕಲ್ಲೂರು ರೋಡ್ ಗ್ರಾಮದಲ್ಲಿ ಪರಿಚಯಸ್ಥರೊಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಶವ ಸಂಸ್ಕಾರಕ್ಕೆಂದು ಸೇಡಂ ತಾಲೂಕಿನ ಮಳಖೇಡದಿಂದ ಟ್ರ್ಯಾಕ್ಟರ್ ನಲ್ಲಿ ಒಟ್ಟು 23 ಜನರು ತೆರಳಿದ್ದರು. ಈ ವೇಳೆ ಕಲ್ಲೂರು ಗ್ರಾಮದ ಸಮೀಪ ಬರುತ್ತಿದ್ದಂತೆ ಬಿಸಿಲಿನ ತೀವ್ರತೆಗೆ ಟ್ರ್ಯಾಕ್ಟರ್ ನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ರಸ್ತೆ ಬದಿಗೆ ಉರುಳಿದೆ. ಈ ಬಗ್ಗೆ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!