ರಾಜ್ಯ ಸರಕಾರದಿಂದ- 15 ಐಪಿಎಸ್ ಅಧಿಕಾರಿಗಳ‌ ವರ್ಗಾವಣೆ

ಬೆಂಗಳೂರು, ಜೂ.20: ರಾಜ್ಯ ಸರಕಾರವು ಪೊಲೀಸ್ ಇಲಾಖೆಯ 15 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ  ಸಿ.ಬಿ.ರಿಷ್ಯಂತ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಬೆಂಗಳೂರು ಮೆಟ್ರೋಪಾಲಿಟಿನ್ ಕಾರ್ಯಪಡೆಯ ಎಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ರಾಜ್ಯ ಪೊಲೀಸ್ ವಸತಿ ನಿಗಮದ ಎಡಿಜಿಪಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರನ್ನು ಬಂಧೀಖಾನೆಯ ಎಡಿಜಿಪಿಯಾಗಿ, ರಾಜ್ಯ ಪೊಲೀಸ್ ವಸತಿ ನಿಗಮದ ಎಡಿಜಿಪಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಕ್ರವರ್ತಿ ಜೆ. ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಹಾಗೂ ಬಂಧೀಖಾನೆಯ ಎಡಿಜಿಪಿ ಮನೀಷ್ ಕರ್ಬಿಕರ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳು ವಿಭಾಗದ ಎಡಿಜಿಪಿಯಾಗಿ, ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ, ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಪುಲ್ ಕುಮಾರ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮೈಸೂರು ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರನ್ನು ಸಿಐಡಿ ವಿಭಾಗದ ಐಜಿಪಿಯಾಗಿ, ಬೆಳಗಾವಿ ಉತ್ತರ ವಲಯ ಐಜಿಪಿ ಎನ್.ಸತೀಶ್ ಕುಮಾರ್ ಅವರನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಐಜಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಐಜಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರನ್ನು ರಾಜ್ಯ ಮೀಸಲು ಪೊಲೀಸ್ ಪಡೆಯ ಐಜಿಪಿಯಾಗಿ, ಎಂ.ಎಸ್.ಐ.ಎಲ್.ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ನಗರದ ಐಜಿಪಿ ಹಾಗೂ ಪೊಲೀಸ್ ಆಯುಕ್ತ ರಮಣ್ ಗುಪ್ತ ಅವರನ್ನು ಬೆಳಗಾವಿಯ ಉತ್ತರ ವಲಯ ಐಜಿಪಿಯಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಸ್.ಎನ್.ಸಿದ್ದರಾಮಪ್ಪ ಅವರನ್ನು ಬೆಂಗಳೂರಿನಲ್ಲಿರುವ ಪೊಲೀಸ್ ಕೇಂದ್ರ ಕಚೇರಿಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ನಗರದ ಡಿಐಜಿ ಹಾಗೂ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಮೈಸೂರಿನ ದಕ್ಷಿಣ ವಲಯ ಡಿಐಜಿಪಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸಿ.ವಂಶಿಕೃಷ್ಣ ಅವರನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿಐಜಿಪಿಯಾಗಿ ಸರಕಾರ ವರ್ಗಾವಣೆ ಮಾಡಿದೆ.

Leave a Reply

Your email address will not be published. Required fields are marked *

error: Content is protected !!