ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ನಿಗಾವಹಿಸಿ- ಡಿಜಿಪಿ ಅಲೋಕ್ ಮೋಹನ್ ಸೂಚನೆ
ಬೆಂಗಳೂರು ಜೂ.22 : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಬಗ್ಗೆ ವಿಶೇಷ ನಿಗಾ ವಹಿಸಲು ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಎಲ್ಲಾ ವಿಭಾಗದ ಡಿಸಿಪಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಹಾಗೂ ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂದು ಸೂಚನೆ ನೀಡಿದರು.
ಹಾಗೂ ತಮ್ಮ ವ್ಯಾಪ್ತಿಗೆ ವಿವಿಐಪಿಗಳ ಭೇಟಿ ಹೊರತು ಪಡಿಸಿ ಎಲ್ಲಾ ದಿನಗಳಲ್ಲೂ ಠಾಣೆಗೆ ಭೇಟಿ ನೀಡಬೇಕು. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆಯನ್ನು ಖುದ್ದು ಪರಿಶೀಲಿಸಬೇಕು. ನಂತರ ಇದರ ಬಗ್ಗೆ ತಮ್ಮ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.